Breaking
5 Sep 2026, Sat

ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ: ಪಾಲಿಕೆ ನೌಕರ ದುರ್ಮರಣ

ಶಿವಮೊಗ್ಗ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾಲಿಕೆ ನೌಕರರೊಬ್ಬರು ಮೃತಪಟ್ಟ ಘಟನೆ ನಗರದ ಅಲ್ಕೋಳ ಸರ್ಕಲ್ ಸಮೀಪ ನಡೆದಿದೆ.

ಮೃತರನ್ನು ರಂಗನಾಥ್ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಪಾಲಿಕೆಯಲ್ಲಿ ನೌಕರರಾಗಿದ್ದರು ಎನ್ನಲಾಗಿದೆ.

ಅಲ್ಕೋಳ ಸರ್ಕಲ್ ಬಳಿ ಇರುವ ಶ್ರೀನಿಧಿ ವೈನ್ಸ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ರಂಗನಾಥ್ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಸ್ಥಳೀಯರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ರಂಗನಾಥ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *