Breaking
14 May 2026, Thu

ಕುತ್ತಾರಿನಲ್ಲಿ ಕೊರಗಜ್ಜ ವೃತ್ತ ನಿರ್ಮಾಣ ವಿವಾದ: ಖಾದರ್ ವಿರುದ್ಧ ಆಕ್ರೋಶ, 11 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಉಳ್ಳಾಲ ಸಮೀಪದ ಕುತ್ತಾರಿನಲ್ಲಿ ಕೊರಗಜ್ಜ ವೃತ್ತ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ 11 ಮಂದಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ದಿನಗಳ ಹಿಂದೆ ಸ್ಪೀಕರ್ ಯು.ಟಿ. ಖಾದರ್ ಅವರು ಉಳ್ಳಾಲ ತಾಲೂಕಿಗೆ ಭೇಟಿ ನೀಡಿದ್ದ ವೇಳೆ, ಕುತ್ತಾರ್ ಜಂಕ್ಷನ್ನಲ್ಲಿ ಕೊರಗಜ್ಜ ವೃತ್ತ ನಿರ್ಮಾಣ ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಅಸಮಾಧಾನಗೊಂಡಿದ್ದ ಕೆಲವರು ಅವರ ವಾಹನವನ್ನು ತಡೆದು ವಾಗ್ವಾದ ನಡೆಸಿದ್ದರು ಎನ್ನಲಾಗಿದೆ.

ಈ ಕುರಿತು ಸ್ಪೀಕರ್ ಅವರ ಅಂಗರಕ್ಷಕ ಮೊಹಮ್ಮದ್ ಯಾಸಿನ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಉಳಿದ 10 ಮಂದಿಯ ವಿರುದ್ಧ ಸಾರ್ವಜನಿಕ ಸ್ಥಳದಲ್ಲಿ ಜನಪ್ರತಿನಿಧಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅನುಮತಿ ಇಲ್ಲದೆ ಗುಂಪು ಸೇರಿದ್ದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *