Breaking
2 Jul 2026, Thu

ಮಲ್ಪೆ ಸೈಂಟ್ ಮೇರೀಸ್ ದ್ವೀಪ ಪ್ರವೇಶ, ಜಲಕ್ರೀಡೆಗಳಿಗೆ 4 ತಿಂಗಳು ನಿಷೇಧ

ಉಡುಪಿ: ಮಲ್ಪೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್ ಮೇರೀಸ್ ದ್ವೀಪಕ್ಕೆ ಪ್ರವೇಶ ಹಾಗೂ ಮಲ್ಪೆ ಬೀಚ್‌ನಲ್ಲಿನ ಜಲಸಾಹಸ ಕ್ರೀಡೆಗಳಿಗೆ ಜಿಲ್ಲಾಡಳಿತ ಮೇ 16ರಿಂದ ಸೆಪ್ಟೆಂಬರ್ 15ರವರೆಗೆ ಸಂಪೂರ್ಣ ನಿಷೇಧ ಹೇರಿದೆ.

ಮುಂಗಾರು ಮಳೆಗಾಲದ ಅವಧಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಹಿನ್ನೆಲೆ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.

ಹಾರ್ಬರ್ ಕ್ರಾಫ್ಟ್ ನಿಯಮ 1963ರ ಅನ್ವಯ ಈ ನಾಲ್ಕು ತಿಂಗಳ ಅವಧಿಯನ್ನು “ಪ್ರತಿಕೂಲ ಋತು” ಎಂದು ಘೋಷಿಸಲಾಗಿದ್ದು, ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಬೋಟ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಜೊತೆಗೆ ಮಲ್ಪೆ ಬೀಚ್‌ನಲ್ಲಿ ನಡೆಯುವ ಎಲ್ಲಾ ಜಲಸಾಹಸ ಕ್ರೀಡೆಗಳನ್ನೂ ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *