Breaking
16 May 2026, Sat

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

ಕಾಪು: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಹಾಗೂ ವಾರಂಟ್ ಆರೋಪಿ ಅಭಿಜಿತ್ (34) ಎಂಬಾತನನ್ನು ಕಾಪು ಪೊಲೀಸರು ಮೇ 15ರಂದು ಪುಂಜಾಲಕಟ್ಟೆ ಪ್ರದೇಶದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಆರೋಪಿ 2016ರಲ್ಲಿ ಮಲ್ಲಾರು ಪಕೀರಣಕಟ್ಟೆ ಸಮೀಪ ಮಹಿಳೆಯೊಬ್ಬರ ಮಾನಭಂಗಕ್ಕೆ ಯತ್ನಿಸಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದು, ವಿಚಾರಣೆ ನಡೆಯುತ್ತಿದ್ದ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದನು. ಕಳೆದ ಹಲವು ವರ್ಷಗಳಿಂದ ಆರೋಪಿಯ ಪತ್ತೆಗಾಗಿ ಕಾಪು ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.

ಬಂಧಿತ ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮೇ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಳಿಕ ಆರೋಪಿಯನ್ನು ಉಡುಪಿ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆ ವೇಳೆ, ಆರೋಪಿಯ ವಿರುದ್ಧ ಮೈಸೂರುನ ನರಸಿಂಹರಾಜಪುರ ಪೊಲೀಸ್ ಠಾಣೆ ಹಾಗೂ ಬಜಪೆ ಪೊಲೀಸ್ ಠಾಣೆಗಳಲ್ಲಿ ಸಹ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿಯೂ ಆತ ತಲೆಮರೆಸಿಕೊಂಡಿದ್ದನು ಎಂಬ ಮಾಹಿತಿ ಬಹಿರಂಗವಾಗಿದೆ.

ಆರೋಪಿಯ ಪತ್ತೆ ಕಾರ್ಯಾಚರಣೆಯನ್ನು ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ವಿಜಯ್ ಪ್ರಸಾದ್ ಹಾಗೂ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಕಾಪು ಪೊಲೀಸ್ ಠಾಣೆಯ ಎಸ್ಐಗಳಾದ ತೇಜಸ್ವಿ ಟಿ.ಐ. ಮತ್ತು ಶುಭಕರ (ತನಿಖೆ) ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮೊಹಮ್ಮದ್ ರಫೀಕ್ ಮತ್ತು ರಾಘು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *