ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪಿಯೋರ್ವನನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ನಿವಾಸಿ ಭರತ್ ಜಯರಾಮ್ ದಾಸ್ (34) ಎಂಬಾತನನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಆರೋಪಿಯ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣದಲ್ಲಿ ಈಗಾಗಲೇ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಭರತ್ ಜಯರಾಮ್ ದಾಸ್‌ನನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಗುರುವಾರ ಆದೇಶ ಹೊರಡಿಸಲಾಗಿದೆ. ಆರೋಪಿಯನ್ನು ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.


