ತೀರ್ಥಹಳ್ಳಿ: ಕೈಮರ ಸಮೀಪ ಶನಿವಾರ ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ.

ಬಳ್ಳಾರಿ ಮೂಲದ ಖಾಸಗಿ ಬಸ್ ಹಾಗೂ ಶಿವಮೊಗ್ಗ ಮೂಲದ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಯಿಂದ ಕಾರಿನ ಮುಂಭಾಗ ಹಾನಿಗೊಳಗಾಗಿದೆ. ಬಸ್ ಪಲ್ಟಿಯಾದ ಘಟನೆ ನಡೆದಿದೆ.

ಅಪಘಾತದಲ್ಲಿ ಎರಡೂ ವಾಹನಗಳಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕಾರಣ ಕುರಿತು ತನಿಖೆ ನಡೆಯುತ್ತಿದೆ. ಪ್ರಾಥಮಿಕವಾಗಿ ನಿದ್ರಾ ಮಂಪರಿನಲ್ಲಿ ಚಾಲನೆ ಮಾಡಿದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.


