ಪುತ್ತೂರು: ಬೈಕ್ ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಬೆಟ್ಟಂಪಾಡಿಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಬೆಟ್ಟಂಪಾಡಿಯ ಸರಳೀಕಾನ ನಿವಾಸಿ ಸಶಿತ್ ಎಸ್. ಎಂದು ಗುರುತಿಸಲಾಗಿದೆ.

ವಿಟ್ಲ ಅಜ್ಜಿನಡ್ಕದಿಂದ ಬುಳೇರಿಕಟ್ಟೆ ಕಡೆಗೆ ಬರುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯರ ಮಾಹಿತಿಯ ಪ್ರಕಾರ, ಶಸ್ತ್ರಚಿಕಿತ್ಸೆ ಹಾಗೂ ಮುಂದಿನ ಚಿಕಿತ್ಸೆಗೆ ಸುಮಾರು ₹6 ರಿಂದ ₹7 ಲಕ್ಷ ವೆಚ್ಚವಾಗುವ ಸಾಧ್ಯತೆಯಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಈ ವೆಚ್ಚ ಭರಿಸುವುದು ಕಷ್ಟಕರವಾಗಿರುವುದರಿಂದ, ಸಹೃದಯ ದನಿಗಳ ತಮ್ಮಿಂದಾದ ಸಹಾಯ ಮಾಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.



