Breaking
4 Sep 2026, Fri

ಪಡಂಗಡಿಯಲ್ಲಿ ಭೀಕರ ಅಪಘಾತ : ಮಹಿಳೆ ಸಾವು

ಬೆಳ್ತಂಗಡಿ: ಪಡಂಗಡಿ ಗ್ರಾಮದ ಓಡೀಲು ದೇವಸ್ಥಾನದ ದ್ವಾರದ ಬಳಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಬಳಂಜ ನಿವಾಸಿ ಶೈಲಜಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅವರ ಪತಿ, ಪ್ರಗತಿಪರ ಕೃಷಿಕ ಅನಿಲ್ ಭಟ್ ಹಾಗೂ ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅನಿಲ್ ಭಟ್ ಅವರು ಪತ್ನಿ ಶೈಲಜಾ ಮತ್ತು ಮಗನೊಂದಿಗೆ ಬೈಕ್‌ನಲ್ಲಿ ವೇಣೂರು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ವೇಣೂರು ಕಡೆಯಿಂದ ಬಂದ ಕಾರೊಂದು ಓಡೀಲು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಶೈಲಜಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಅನಿಲ್ ಭಟ್ ಹಾಗೂ ಪುತ್ರನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *