ಕಾರ್ಕಳ : ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೊ ಕಾರೊಂದು ಕಾರ್ಕಳ ತಾಲೂಕಿನ ಮುನಿಯಾಲು ರಾಜ್ಯ ಹೆದ್ದಾರಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಮಗುಚಿ ಬಿದ್ದ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಹಾಗೂ ಇಬ್ಬರು ಪುರುಷರು ಸೇರಿ ಒಟ್ಟು ಏಳು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದು ನೆರವು ನೀಡಿದ್ದಾರೆ.

ನಂತರ ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ಕಾರನ್ನು ಮೇಲಕ್ಕೆತ್ತಲಾಗಿದ್ದು, ಕಾರು ಜಖಂಗೊಂಡಿದೆ ಎಂದು ತಿಳಿದುಬಂದಿದೆ.



