ಬಂಟ್ವಾಳ: ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡ್ತಾಲಬೆಟ್ಟು ಅಜ್ಜಿಬೆಟ್ಟು ಗ್ರಾಮ ಬಂಟ್ವಾಳ ತಾಲೂಕು ಇಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ ಸಹಯೋಗದಲ್ಲಿ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 19 ಗುರುವಾರದಂದು ನಡೆಯಲಿದೆ.
ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಭಾರತಿ ರಾಜೇಂದ್ರ ಪೂಜಾರಿ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಇವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಪಾಲ್ಗೊಳ್ಳಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಲರವ, ವಿಠಲ ನಾಯಕ್ ಹಾಗೂ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ, ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಅಲ್ಲದೇ ಹಳೇ ವಿದ್ಯಾರ್ಥಿ ಭರತ್ ರಾಜ್ ಶೆಟ್ಟಿ ಮತ್ತು ಬಳಗದವರಿಂದ ಯಕ್ಷ-ಗಾನ-ವೈಭವ ನಡೆಯಲಿದೆ ಎಂದು ಶಾಲಾಭಿವೃದ್ದಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.