Breaking
4 Sep 2026, Fri

ಅಧಿಕಮಾಸ ಪರ್ವಕಾಲ : ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ್ಮೀ ನಾರಾಯಣ ಹೃದಯ ಹೋಮ

ಸಜೀಪ: ಅಧಿಕಮಾಸದ ಪರ್ವಕಾಲದ ಅಂಗವಾಗಿ ಸೋಮವಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಶ್ರೀ ಕ್ಷೇತ್ರದಲ್ಲಿ ಲಕ್ಷ್ಮೀ ನಾರಾಯಣ ಹೃದಯ ಹೋಮ ಹಾಗೂ ದೇವರಿಗೆ ವಿಶೇಷ ಸೇವಾ ಪೂಜೆ ಭಕ್ತಿಭಾವದಿಂದ ನೆರವೇರಿತು.

ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಪೂಜೆ ಹಾಗೂ ಹೋಮದ ಬಳಿಕ ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು.

Leave a Reply

Your email address will not be published. Required fields are marked *