Breaking
14 Jul 2026, Tue

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶೆ ಇಂದ್ರಕಲಾ ಬಿ.ಎಸ್. ಅಸೌಖ್ಯದಿಂದ ನಿಧನ

ಮಂಗಳೂರು: ಇಂದ್ರಕಲಾ ಬಿ. ಎಸ್. ಅವರು ಅಸೌಖ್ಯದಿಂದ ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಮೇ 21ರಂದ ನಿಧನ ಹೊಂದಿದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಇಂದ್ರಕಲಾ ಬಿ.ಎಸ್. ಅವರು ಮಂಗಳೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಬಳಿಕ 2012ರಲ್ಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡು, ಆ ಸ್ಥಾನಕ್ಕೇರಿದ ಮೂರನೇ ಮಹಿಳಾ ನ್ಯಾಯಾಧೀಶೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2013ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡ ಅವರು 2014ರ ಏಪ್ರಿಲ್ ವರೆಗೆ ಕರ್ತವ್ಯ ನಿರ್ವಹಿಸಿದರು.

ನಂತರ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆಯಾಗಿ ಕೂಡ ಸೇವೆ ಸಲ್ಲಿಸಿದ್ದರು. ಮಂಗಳೂರಿನ ವಾಮಂಜೂರಿನಲ್ಲಿ 1994ರಲ್ಲಿ ನಡೆದ ನಾಲ್ವರು ಸಂಬಂಧಿಕರ ಹತ್ಯೆ ಪ್ರಕರಣದಲ್ಲಿ ಅಪರಾಧಿ ಪ್ರವೀಣ್ ಕುಮಾರ್‌ಗೆ ಗಲ್ಲು ಶಿಕ್ಷೆ ವಿಧಿಸಿ ನೀಡಿದ ತೀರ್ಪು ವಿಶೇಷ ಗಮನ ಸೆಳೆದಿತ್ತು.

ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಪರಮ ಭಕ್ತೆಯಾಗಿದ್ದ ಇಂದ್ರಕಲಾ ಅವರು ಮಂಗಳೂರಿನಲ್ಲಿ ಇದ್ದಾಗ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು.

Leave a Reply

Your email address will not be published. Required fields are marked *