Breaking
14 Jul 2026, Tue

ಉಪ್ಪಿನಂಗಡಿ: 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು

ಉಪ್ಪಿನಂಗಡಿ: ನಿಯಂತ್ರಣ ತಪ್ಪಿದ ಕಾರು 70 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನಡೆದಿದೆ.

ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯಿಂದ ಸುಮಾರು 70 ಅಡಿ ಆಳದ ನದಿ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪರಿಚಿತರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು.

Leave a Reply

Your email address will not be published. Required fields are marked *