ಕಲ್ಲಡ್ಕ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಯುವ ಸ್ನೇಹ ಸಂಭ್ರಮ – 2026” ಎಂಬ ಒಂದು ದಿನದ ಸ್ನೇಹ ಪ್ರವಾಸವು ಮೇ 24 ಭಾನುವಾರ ಯಶಸ್ವಿಯಾಗಿ ನಡೆಯಿತು.

ಬೆಳಿಗ್ಗೆ 6 ಗಂಟೆಗೆ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲ ಸದಸ್ಯರನ್ನು ಸ್ವಾಗತಿಸಿ ಪ್ರವಾಸಕ್ಕೆ ಅಧಿಕೃತ ಚಾಲನೆ ನೀಡಿದರು.

ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಕಾಪು ಮಾರಿಕಾಂಬ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಬ್ರಹ್ಮಾವರದ ಪ್ರಕೃತಿ ಸೌಂದರ್ಯದಿಂದ ಕೂಡಿದ ಹಿಡನ್ ಹೆವನ್ ತಾಣಕ್ಕೆ ತೆರಳಿ ದಿನವಿಡಿ ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿದರು.
ಈ ಸ್ನೇಹ ಪ್ರವಾಸದಲ್ಲಿ ಒಟ್ಟು 66 ಸದಸ್ಯರು ಭಾಗವಹಿಸಿ ಸಂಭ್ರಮಿಸಿದರು.



