ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ ಅಗರಿ ಕ್ರಾಸ್ ಬಳಿ ನಡೆದ ಕಾರು–ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ (36) ಅವರು ಮೇ 25ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕಳೆಂಜ ನಿವಾಸಿ ನೋಣಯ್ಯ ಗೌಡ ಅವರ ಪುತ್ರರಾದ ಗಣೇಶ್ ಗೌಡ ಅವರು ಕಾಯರ್ತಡ್ಕದಲ್ಲಿ “ಗಣೇಶ್ ಸ್ಟುಡಿಯೋ” ನಡೆಸುತ್ತಿದ್ದರು. ಮೇ 24ರಂದು ಅವರು ಉಜಿರೆಯಿಂದ ಕಕ್ಕಿಂಜೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರಿನೊಂದಿಗೆ ಡಿಕ್ಕಿ ಸಂಭವಿಸಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಮಂಗಳೂರು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.



