Breaking
26 May 2026, Tue

ಪುತ್ತೂರು: ವಿದ್ಯುತ್ ಶಾಕ್‌ಗೆ ಯುವಕ ಬಲಿ

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ನಿಡಳ್ಳಿ ಗ್ರಾಮದ ಬೋಳುಂಬುಡೆ ಪ್ರದೇಶದಲ್ಲಿ ಮೇ 24ರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಎಂದು ಗುರುತಿಸಲಾಗಿದೆ.

ತಂದೆ ಜೋಕಿಂ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ತಮ್ಮ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ಈ ವೇಳೆ ರಾತ್ರಿ ಸಮಯದಲ್ಲಿ ರೋಶನ್ ಬಟ್ಟೆ ಒಗೆಯುವ ಸ್ಥಳಕ್ಕೆ ತೆರಳಿದಾಗ ಅಲ್ಲಿದ್ದ ವಿದ್ಯುತ್ ತಂತಿಯಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ರೋಶನ್ ಪಿಂಟೋ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯ ನಿಮಿತ್ತ ಊರಿಗೆ ಬಂದಿದ್ದರು. ಮೃತರು ತಂದೆ, ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *