Breaking
26 May 2026, Tue

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಕಂಭ ಒಕ್ಕೂಟ ಅಧ್ಯಕ್ಷರಾಗಿ ಸುನಿಲ್ ನಾಯ್ಕ ಆಯ್ಕೆ

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ವಿಟ್ಲ ಇದರ ಕಲ್ಲಡ್ಕ ವಲಯದ ವೀರಕಂಭ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸುನಿಲ್ ನಾಯ್ಕ ಆಯ್ಕೆಯಾಗಿದ್ದಾರೆ.

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಪ್ರೇಮ ಕಾಣೆ ಕೋಡಿ, ಕಾರ್ಯದರ್ಶಿಯಾಗಿ ಅಖಿಲ ಮೈರಾ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಜಿ, ಕೋಶಾಧಿಕಾರಿಯಾಗಿ ನೋಣಯ್ಯ ಎಂ ಆರ್ ಮಜಿ ರವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್, ಒಕ್ಕೂಟ ಸೇವಾ ಪ್ರತಿನಿಧಿಗಳಾದ ವಿಜಯ, ರೇವತಿ, ನಿಕಟ ಪೂರ್ವ ಅಧ್ಯಕ್ಷ ಶಾಂಭವಿ ಆಚಾರ್ಯ, ಕಾರ್ಯದರ್ಶಿ ಆನಂದ ಮಜಿ, ಉಪಸಮಿತಿಯ ಸದಸ್ಯೆ ವೇದಾವತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *