Breaking
13 Jul 2026, Mon

ಹಳೆಯಂಗಡಿಯಲ್ಲಿ ಟಿಪ್ಪರ್-ಬಸ್ ಅಪಘಾತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಹಳೆಯಂಗಡಿ: ಹಳೆಯಂಗಡಿಯ ಇಂದಿರಾ ನಗರ ಬಸ್ ನಿಲ್ದಾಣದ ಬಳಿ ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರ್ವಿಸ್ ಬಸ್ಸಿಗೆ ಟಿಪ್ಪರ್ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಬಸ್ ಇಂದಿರಾ ನಗರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಬಸ್ಸಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *