Breaking
28 May 2026, Thu

ಮುಲ್ಕಿ: ಬೈಕ್‌ ಕಳ್ಳತನ ಪ್ರಕರಣ ಭೇದಿಸಿದ ಮುಲ್ಕಿ ಪೊಲೀಸರು; ಇಬ್ಬರು ಆರೋಪಿಗಳ ಬಂಧನ

ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುರತ್ಕಲ್ ಮುಕ್ಕದ ನಿವಾಸಿ ಮೊಹಮ್ಮದ್ ರಾಝಿಕ್ (36) ಹಾಗೂ ಬೈಕಂಪಾಡಿ ಅಂಗರಗುಂಡಿಯ ನಿವಾಸಿ ಉಬೈದತ್ ಹೈದರ್ (31) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಕಳುವಾದ ಹೋಂಡಾ ಯುನಿಕಾರ್ನ್ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೇ 18, 2026ರಂದು ಮುಲ್ಕಿ ಜಂಕ್ಷನ್‌ನ ಅಪೋಲೊ ಫಾರ್ಮಾ ಸಮೀಪ ನಿಲ್ಲಿಸಿದ್ದ ಕೆಎ 20 ಇಬಿ 6383 ಸಂಖ್ಯೆಯ ಹೋಂಡಾ ಯುನಿಕಾರ್ನ್ ಬೈಕ್ ಅನ್ನು ಆರೋಪಿಗಳು ಕಳ್ಳತನ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ಮುಲ್ಕಿ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಸುಮಾರು ₹20 ಸಾವಿರ ಮೌಲ್ಯದ ಬೈಕ್ ಹಾಗೂ ₹18 ಸಾವಿರ ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ಕ್ರೈಂ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಆರೋಪಿ ಮೊಹಮ್ಮದ್ ರಾಝಿಕ್ ವಿರುದ್ಧ ಈ ಹಿಂದೆ ಸುರತ್ಕಲ್, ಪಣಂಬೂರು ಹಾಗೂ ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಉಬೈದತ್ ಹೈದರ್ ವಿರುದ್ಧವೂ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *