Breaking
1 Jun 2026, Mon

ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲ ಓಬಿಸಿ ಮೋರ್ಚಾ ಸಭೆ; ಪದಾಧಿಕಾರಿಗಳ ಪದಗ್ರಹಣ

ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿಯ ಮೂಲ್ಕಿ-ಮೂಡುಬಿದಿರೆ ಮಂಡಲದ ಹಿಂದುಳಿದ ವರ್ಗಗಳ (ಓಬಿಸಿ) ಮೋರ್ಚಾದ ಸಭೆಯು ಓಬಿಸಿ ಮೋರ್ಚಾದ ಅಧ್ಯಕ್ಷರಾದ ಪ್ರದೀಪ್ ವಾಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಮಹೇಶ್ ಜೋಗಿ, ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ ರಾವ್ ಹಾಗೂ ವಿನೋದ್ ಸಾಲ್ಯಾನ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಜ, ಮಂಡಲ ಕೋಶಾಧಿಕಾರಿ ಹಾಗೂ ಮಂಡಲ ಓಬಿಸಿ ಪ್ರಭಾರಿ ಪ್ರಭಾಕರ್ ಕುಲಾಲ್, ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಪೂಜಾರಿ ನೇತ್ತೋಡಿ, ಹೇಮಂತ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ಅವರ ಉಪಸ್ಥಿತಿಯಲ್ಲಿ ಓಬಿಸಿ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು. ಪಕ್ಷದ ಸಂಘಟನೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಮುಖಂಡರು ಕರೆ ನೀಡಿದರು.

ಸಭೆಯಲ್ಲಿ ಮುಂದಿನ ದಿನಗಳ ಸಂಘಟನಾ ಚಟುವಟಿಕೆಗಳು, ಸದಸ್ಯತ್ವ ವೃದ್ಧಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

Leave a Reply

Your email address will not be published. Required fields are marked *