ಮಿಜಾರು: ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ (ರಿ.), ಮಿಜಾರು ವತಿಯಿಂದ 73ನೇ ಮಾಸಿಕ ಶೈಕ್ಷಣಿಕ ಸೇವಾ ಯೋಜನೆಯ ಅಂಗವಾಗಿ ಸರಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಶೈಕ್ಷಣಿಕ ಸೇವಾ ಯೋಜನೆಯಡಿ ಈ ತಿಂಗಳು ಸರಕಾರಿ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸುವಂತೆ ಮನವಿ ಬಂದ ಹಿನ್ನೆಲೆಯಲ್ಲಿ, ಟ್ರಸ್ಟ್ ಸದಸ್ಯರು ಸ್ಪಂದಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ, ತಿಪ್ಲಾಬೆಟ್ಟು ಬಡಗ ಎಡಪದವು ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಬಡಗ ಎಡಪದವು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಹಾಸ್ ಉರ್ಕಿ, ಟ್ರಸ್ಟ್‌ನ ಸಂಸ್ಥಾಪಕ ನವೀನ್ ಪಿ. ಮಿಜಾರ್ ಹಾಗೂ ಸೇವಾ ಮಾಣಿಕ್ಯ ಅಕ್ಷಯ್ ದೋಡ್ಲಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಯಶಸ್ಸಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ (ರಿ.), ಮಿಜಾರು, ಕಾರ್ಯವಿಭಾಗದ ವತಿಯಿಂದ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು.


