Breaking
3 Jun 2026, Wed

ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅಲಾದಿ ಕೊಟ್ಟಿಗೆಯಲ್ಲಿ ಸೋಮವಾರ ನಡೆದ ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಗಳಾದ ಬೆಳ್ತಂಗಡಿಯ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬದ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿಯ ಪಡಂಗಡಿ ನಿವಾಸಿ ಇಬ್ರಾಹಿಂ (54) ಅವರನ್ನು ಮಂಗಳವಾರ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು.

ಯತೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಆರೋಪಿಸಿ, ಮೃತರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ತನಿಖೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *