ಹೊಕ್ಕಾಡಿಗೋಳಿ: ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಜೂನ್ 1ರಂದು ವಿಜೃಂಭಣೆಯಿಂದ ನಡೆಯಿತು.
ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು. ಬಳಿಕ ಬ್ಯಾಡ್ಜ್ ಹಾಗೂ ಪುಸ್ತಕಗಳನ್ನು ನೀಡಿ ಆತ್ಮೀಯ ಸ್ವಾಗತ ಕೋರಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ನೂತನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು.

ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಭಟ್ ಅವರ ಪ್ರಾಯೋಜಕತ್ವದಲ್ಲಿ, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಅಧ್ಯಕ್ಷ ಶ್ರೀ ವಿಜಯ ಫೆರ್ನಾಂಡೀಸ್ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಕೊಡೆಗಳನ್ನು ವಿತರಿಸಿದರು. ದಾನಿಗಲಾದ ಶ್ರೀ ಮನೋಜ್ ಐತೇರಿ ಅವರು ಉಚಿತವಾಗಿ ನೀಡಿದ ನೋಟ್ ಪುಸ್ತಕಗಳನ್ನು ಅವರ ತಂದೆ ಶ್ರೀ ಹರಿಯಪ್ಪ ಶೆಟ್ಟಿ ಎಲ್ಲಾ ವಿದ್ಯಾರ್ಥಿಗಳಿಗೆ ಹಂಚಿದರು.

ಕಾರ್ಯಕ್ರಮದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಲೀಲಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ರಾಘವೇಂದ್ರ ಭಟ್, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಅಧ್ಯಕ್ಷ ಶ್ರೀ ವಿಜಯ ಫೆರ್ನಾಂಡೀಸ್, ಸಿಎ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಶೆಟ್ಟಿ, ಆರಂಬೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ ಶೆಟ್ಟಿ ಹಾಗೂ ಶಾಲೆಯ ಮಾಜಿ ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ ಹುಲಿಮೇರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿರುವ ದಿನೇಶ್ ಸಭಾ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು.
ಮುಖ್ಯ ಶಿಕ್ಷಕರು ಸ್ವಾಗತಿಸಿದರು. ಶಿಕ್ಷಕಿ ಸಿಲ್ವಿಯಾ ಮಿರಾಂದ ವಂದಿಸಿದರು. ಶ್ರೀಮತಿ ಮೆಟಿಲ್ಡಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಶುಭವತಿ ಹಾಗೂ ಸುತೀಕ್ಷಾ ಸಹಕರಿಸಿದರು.


