Breaking
4 Jun 2026, Thu

ಬೆಳ್ತಂಗಡಿ: ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗೆ ಒತ್ತಾಯ

ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಸುಮಾರು ಐದು ತಿಂಗಳ ಹಿಂದೆ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ನಿರಂತರವಾಗಿ ಒತ್ತಾಯಿಸಲಾಗುತ್ತಿದೆ.

ಈ ಕುರಿತು ಈ ಹಿಂದೆಯೇ ವಿಧಾನಮಂಡಲ ಅಧಿವೇಶನದಲ್ಲಿ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಮಾನ್ಯ ಗೃಹ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ, ಇಷ್ಟೊಂದು ಸಮಯ ಕಳೆದರೂ ಕುಟುಂಬಕ್ಕೆ ನ್ಯಾಯ ದೊರಕದಿರುವುದು ಬೇಸರದ ಸಂಗತಿಯಾಗಿದೆ.

ಈ ಹಿನ್ನೆಲೆಯಲ್ಲಿ ಜೂನ್ 3 ರಂದು ಮೃತ ಬಾಲಕ ಸುಮಂತ್ ಅವರ ಪೋಷಕರು ಹಾಗೂ ಕುಟುಂಬ ಸದಸ್ಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಪ್ರಕರಣದ ತನಿಖೆಯ ಪ್ರಗತಿ ಹಾಗೂ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಆಯಾಮಗಳಲ್ಲೂ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಶೀಘ್ರದಲ್ಲೇ ಸತ್ಯಾಂಶ ಹೊರಬರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ನಿರಪರಾಧಿ ಬಾಲಕನ ಸಾವಿನ ಪ್ರಕರಣದಲ್ಲಿ ಸತ್ಯ ಬಹಿರಂಗವಾಗಿ ಕುಟುಂಬಕ್ಕೆ ನ್ಯಾಯ ದೊರಕುವವರೆಗೆ ಅವರೊಂದಿಗೆ ನಿಂತು ಹೋರಾಟ ಮುಂದುವರಿಯಲಿದೆ ಎಂದು ತಿಳಿಸಲಾಯಿತು.

Leave a Reply

Your email address will not be published. Required fields are marked *