ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಮುಖ್ಯ ವೃತ್ತದಲ್ಲಿ ಜೂನ್ 2 ರಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಮಣೂರು ಜಟ್ಟಿಗೇಶ್ವರ ದೈವಸ್ಥಾನ ಸಮೀಪದ ಕೋಟಿ ಪೂಜಾರಿ ಅವರ ಮನೆಯ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ.
ರಾತ್ರಿ ಸುಮಾರು 9:47ರ ವೇಳೆಗೆ ದ್ವಿಚಕ್ರ ವಾಹನ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸಂಪೂರ್ಣ ದೃಶ್ಯಾವಳಿಗಳು ತೆಕ್ಕಟ್ಟೆ ಮುಖ್ಯ ಜಂಕ್ಷನ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಮಾಹಿತಿ ಪಡೆದ ಕೋಟ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


