ಮಾಣಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು ಬದುಕಿಗೆ ನೆರಳು” ಎಂಬ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಸಭಾಭವನದ ವಠಾರದಲ್ಲಿ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ನಾರಾಯಣ ಗುರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನಾರಾಯಣ ಸಾಲಿಯಾನ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಕಾರ್ಯದರ್ಶಿ ರಮೇಶ್ ಪೂಜಾರಿ ಮುಜಲ, ಸಿಇಒ ಪಲ್ಲವಿ ಲೋಕೇಶ್, ಪ್ರಚಾರ ನಿರ್ದೇಶಕ ಚರಣ್, ಗೀತಾ ಹಾಗೂ ಮ್ಯಾನೇಜರ್ ಜನಾರ್ಧನ ಪೂಜಾರಿ ಉಪಸ್ಥಿತರಿದ್ದರು.

ನಂತರ ಈ ಅಭಿಯಾನದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಬನ ಕಟ್ಟೆ ಹಾಗೂ ಗ್ರಾಮ ಪಂಚಾಯಿತಿ ಅನಂತಾಡಿಯಲ್ಲಿ ಯುವ ವೃಕ್ಷೋತ್ಸವವನ್ನು ಕೈಗೊಳ್ಳಲಾಯಿತು.ಇದೇ ರೀತಿ ಈ ವಿಭಿನ್ನ ವೃಕ್ಷೋತ್ಸವ ಅಭಿಯಾನವು ಸರಕಾರಿ ಶಾಲೆ, ಆಸ್ಪತ್ರೆ, ಗ್ರಾಮ ಪಂಚಾಯತ್ ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಒಂದು ತಿಂಗಳ ಕಾಲ ನಿರಂತರವಾಗಿ ಮುಂದುವರಿಯಲಿದೆ ಎಂದು ಘಟಕದ ಅಧ್ಯಕ್ಷರಾದ ಶ್ರೀ ಗಣೇಶ್ ಸಾಯಿರವರು ತಿಳಿಸಿದರು.



