ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು–ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿಯ ಅಳಿರಾ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ವಾಹನದಲ್ಲಿದ್ದ ದಂಪತಿ ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.




