ಇಲವಾಲ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಲವಾಲ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿರುವ PGRSS ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದ ತಾಯಂದಿರ ಸಮ್ಮುಖದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.

ಇಲವಾಲ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾದ ಕುಮಾರ್ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ವೇಳೆ ಮಾತನಾಡಿದ ಅವರು, “ಮನೆಗೊಂದು ಗಿಡ, ಊರಿಗೊಂದು ವನ” ಎಂಬ ಧ್ಯೇಯದೊಂದಿಗೆ ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವ ಮೂಲಕ ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ PGRSS ಪಂಚಾಯತ್ ಗ್ರಾಮೀಣ ಅಭಿವೃದ್ಧಿ ರೈತರ ಸೇವಾ ಸಮಿತಿಯ ಅಧ್ಯಕ್ಷರಾದ ಯಾದವ್ ಹರೀಶ್, ಚಿರಜೀವ ಸೇವಾ ಟ್ರಸ್ಟ್ ನ ಅಧ್ಯಕ್ಷ ಹಾಗೂ ರಕ್ತದಾನಿ ಮಂಜೂರ್, ಇಲವಾಲ ಗ್ರಾಮದ ದೇವರ ಅರ್ಚಕರು, ಆಶ್ರಮದ ತಾಯಂದಿರು ಹಾಗೂ ಇತರರು ಉಪಸ್ಥಿತರಿದ್ದರು.




