ಮೂಡಬಿದ್ರೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪುಚ್ಚಮೊಗರು ಇಲ್ಲಿ ಡಿಸೆಂಬರ್ 23 ಸೋಮವಾರ 2024-25ನೇ ಸಾಲಿನ ಶಾಲಾ ವಾರ್ಷಿಕೋತ್ಸವ ನಡೆಯಲಿದೆ.
ಪೂರ್ವಾಹ್ನ 9ರಿಂದ ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಆರಂಭವಾಗಲಿದ್ದು ಬೆಳಿಗ್ಗೆ 10ರಿಂದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲರವ, ಸಭಾಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ನೃತ್ಯ ವೈಭವ ಹಾಗೂ ರಾತ್ರಿ 8ರಿಂದ ಚಾ ಪರ್ಕ ಕಲಾವಿದೆರ್ ಕುಡ್ಲ ಇವರಿಂದ “ಏರ್ಲಾ ಗ್ಯಾರಂಟಿ ಅತ್ತ್ ” ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಮಹಮ್ಮದ್ ಝೂಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.