Breaking
8 Jun 2026, Mon

ಯುವವಾಹಿನಿ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆ

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಮಧುಸೂದನ್ ಮದ್ವ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ನವೀನ್ ಪೂಜಾರಿ ವಾರ್ಷಿಕ ಲೆಕ್ಕಪತ್ರವನ್ನು ಸಭೆಯ ಮುಂದಿರಿಸಿದರು.

ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಿರಣ್‌ರಾಜ್ ಪೂಂಜರೆಕೋಡಿ ಮಾತನಾಡಿ, ಸದಸ್ಯರ ಸಹಕಾರ ಹಾಗೂ ಮಾರ್ಗದರ್ಶನದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಯಶಸ್ವಿಯಾಗಿ ಮುನ್ನಡೆಸುವ ವಿಶ್ವಾಸ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಎರಡನೇ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಸಲಹೆಗಾರರಾದ ಅಣ್ಣು ಪೂಜಾರಿ ಹಾಗೂ ರಾಮಚಂದ್ರ ಸುವರ್ಣ ಉಪಸ್ಥಿತರಿದ್ದರು. ಜತೆ ಕಾರ್ಯದರ್ಶಿ ಲೋಹಿತ್ ಕನಪಾದೆ ವಂದಿಸಿದರು.

Leave a Reply

Your email address will not be published. Required fields are marked *