ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಬಾಲ್ತಿಲ ಒಕ್ಕೂಟದ ತ್ರೈಮಾಸಿಕ ಸಭೆಯು ಜೂನ್ 7 ರವಿವಾರ ಕಲ್ಲಡ್ಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ಬಾಲ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್ ಯೋಜನೆಯ ಗುಂಪುಗಳ ಕಾರ್ಯ, ಜವಾಬ್ದಾರಿ, ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು, ಆರೋಗ್ಯ ವಿಮೆ ಹಾಗೂ ಪ್ರಸಕ್ತ ಸಾಲಿನಲ್ಲಿ ಬಾಲ್ತಿಲ ಒಕ್ಕೂಟ ವ್ಯಾಪ್ತಿಯಲ್ಲಿ ಯೋಜನೆಯಿಂದ ದೊರೆತ ಸೌಲಭ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ ರವರ ಉಪಸ್ಥಿತಿಯಲ್ಲಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಮಾಧವ ಸಾಲಿಯಾನ್ ಕುದ್ರೆಬೆಟ್ಟು ,ಉಪಾಧ್ಯಕ್ಷರಾಗಿ ಸುಮಿತ್ರ ಬಿ.ಆರ್.ನಗರ, ಕಾರ್ಯದರ್ಶಿಯಾಗಿ ರಮೇಶ್ ಕುದ್ರೆಬೆಟ್ಟು, ಜೊತೆ ಕಾರ್ಯದರ್ಶಿಯಾಗಿ ಸುಲೋಚನಾ ಸುಧೆಕಾರು,ಸಂಯೋಜಕರಾಗಿ ಮಹೇಶ್ ಕುಮಾರ್ ಹಾಗೂ ದಾಖಲಾತಿ ಸಮಿತಿಯಲ್ಲಿ ಸೌಮ್ಯ, ಕವಿತಾ ಪೂರ್ಣಿಮಾ ಪೂಜಾ, ಮಾನ್ವಿತಾ ಆಯ್ಕೆಯಾದರು.

ವೇದಿಕೆಯಲ್ಲಿ ಒಕ್ಕೂಟ ಪದಾಧಿಕಾರಿಗಳಾದ ಸಂತೋಷ್ ಕುಮಾರ್, ಉಷಾ, ಹರೀಶ್ ಉಪಸಮಿತಿಯ ಸದಸ್ಯೆ ಉಷಾ, ರತ್ನ,ಒಕ್ಕೂಟ ಸೇವಾ ಪ್ರತಿನಿಧಿ ವಿದ್ಯಾ ಉಪಸ್ಥಿತರಿದ್ದರು. ಸಭೆಯಲ್ಲಿ ಒಕ್ಕೂಟದ ಎಲ್ಲಾ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.





