Breaking
8 Jun 2026, Mon

ಹೋಂಸ್ಟೇಯಲ್ಲಿ ಗ್ಯಾಸ್ ಸೋರಿಕೆ: ಮೈಸೂರಿನ ಯುವತಿ ದುರ್ಮರಣ

ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಹೋಂಸ್ಟೇ ಒಂದರಲ್ಲಿ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಜೂ. 7ರಂದು ಬೆಳಕಿಗೆ ಬಂದಿದೆ.

ಮೃತರನ್ನು ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಗಳಾದ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನುತ (27) ಎಂದು ಗುರುತಿಸಲಾಗಿದೆ.

ಪ್ರವಾಸ ನಿಮಿತ್ತ ಕೊಡಗಿಗೆ ಬಂದಿದ್ದ ವಿನುತ ಅವರು ಚೌಡ್ಲು ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದರು. ಭಾನುವಾರ ಬೆಳಿಗ್ಗೆ ಸ್ನಾನ ಮಾಡಲು ಬಾತ್ರೂಮ್ಗೆ ತೆರಳಿದ್ದ ವೇಳೆ ಗ್ಯಾಸ್ ಗೀಸರ್ನಿಂದ ಸೋರಿಕೆಯಾದ ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *