Breaking
8 Jun 2026, Mon

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡದ ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜನ್ಮದಿನದ ಅಂಗವಾಗಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿನಿ ಆಯಿಷತ್ ಹೈಪ ಅವರು ಮಾಸ್ತಿ ಅವರ ಜೀವನ ಹಾಗೂ ಸಾಹಿತ್ಯ ಸಾಧನೆಯ ಕುರಿತು ಪರಿಚಯ ಮಾಡಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಅವರು ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಹಾಗೂ ಪುಸ್ತಕಗಳಲ್ಲಿರುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಕ ಸುಮನ್ ಯು.ಎಸ್. ಅವರು ಮಾಸ್ತಿ ಅವರ ಪ್ರಮುಖ ಕೃತಿಗಳನ್ನು ಪರಿಚಯಿಸಿದರು.

ಈ ಸಂದರ್ಭದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೃತಿ ಚಿಕವೀರ ರಾಜೇಂದ್ರ ಪ್ರದರ್ಶಿಸಲಾಯಿತು. ಅಲ್ಲದೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜೀವನ ಮತ್ತು ಸಾಹಿತ್ಯ ಸಾಧನೆ ಕುರಿತ ವಿಡಿಯೋ ತುಣುಕನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವಿದ್ಯಾ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *