ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ಸಭೆಯು ಜೂನ್ 9ರಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್ ಭಾಗವಹಿಸಿ, ತೀವ್ರ ಮತಪಟ್ಟಿ ಪರಿಷ್ಕರಣೆಯ ಮುಂದಿನ ಕಾರ್ಯಯೋಜನೆ, ಪ್ರವಾಸ ಪ್ರಮುಖ ಹಾಗೂ ಮನ್ ಕಿ ಬಾತ್ ಪ್ರಮುಖರ ಆಯ್ಕೆ, ಮಂಗಳೂರಿನಲ್ಲಿ ನಡೆಯಲಿರುವ ಅಭಿನಂದನಾ ಸಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತದ ಸಂಭ್ರಮಾಚರಣೆ ಕುರಿತು ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಅಧ್ಯಕ್ಷೀಯ ಭಾಷಣ ಮಾಡಿದರು. ಜಿಲ್ಲಾ ಮನ್ ಕಿ ಬಾತ್ ಪ್ರಮುಖ ಸೀತಾರಾಮ್ ಮನ್ ಕಿ ಬಾತ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್ ಧನ್ಯವಾದ ಸಲ್ಲಿಸಿದರು.

ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಖೀತ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಹಾಗೂ ಮಂಡಲ ಪ್ರಭಾರಿ ಕಮಲಾಕ್ಷಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಸಂತಿ ಲಕ್ಷ್ಮಣ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ, ಜಿಲ್ಲಾ ಎಸ್‌ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ಸಿ.ಕೆ., ಮಂಡಲ ಕಾರ್ಯದರ್ಶಿ ಅಶ್ವಿನಿ ನಾಯಕ್ ಸೇರಿದಂತೆ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.






