Breaking
11 Jun 2026, Thu

ಬೈಕ್ ನಿಂದ ಆಯತಪ್ಪಿ ಬಿದ್ದು ಡೆಲಿವರಿ ಬಾಯ್ ದುರ್ಮರಣ

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ಫುಡ್ ಡೆಲಿವರಿ ಬಾಯ್ವೊಬ್ಬರು ಮೃತಪಟ್ಟಿರುವ ದುರ್ಘಟನೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಆರ್.ಎಸ್. ಪಾಳ್ಯ ನಿವಾಸಿ ಸಂತೋಷ್ ಡ್ಯಾನಿಯಲ್ (19) ಎಂದು ಗುರುತಿಸಲಾಗಿದೆ.

ಸಂತೋಷ್ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಮಂಗಳವಾರ ತಡರಾತ್ರಿ ಅವರು ತಮ್ಮ ಸ್ನೇಹಿತೆ ಜೀವಿತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕೆಮ್ಮನಹಳ್ಳಿ ಮುಖ್ಯರಸ್ತೆಯ ಆರ್.ಕೆ.ವಿ. ಹಣ್ಣಿನ ಅಂಗಡಿ ಸಮೀಪ ಬೈಕ್ನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸಂತೋಷ್ ಡ್ಯಾನಿಯಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *