ಸುಳ್ಯ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 595 ಅಂಕಗಳನ್ನು ಪಡೆದು ರಾಜ್ಯಕ್ಕೆ 5ನೇ ಸ್ಥಾನ ಗಳಿಸಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ (19) ಅಸೌಖ್ಯದಿಂದ ಬುಧವಾರ ನಿಧನರಾದರು.
ಅಮರಮುಡ್ನೂರಿನ ನಿವಾಸಿ ಡಾ. ರವಿಶಂಕರ್ ಭಟ್ ಅವರ ಪುತ್ರಿಯಾಗಿರುವ ಅಭಿಜ್ಞಾ ಅವರು ಇತ್ತೀಚೆಗೆ ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದರು.

ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನವು ಕುಟುಂಬಸ್ಥರು, ಸ್ನೇಹಿತರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ದುಃಖದ ವಾತಾವರಣ ಮೂಡಿಸಿದೆ.
ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.







