Breaking
12 Jun 2026, Fri

ಬಂಟ್ವಾಳ: ಕರ್ತವ್ಯ ನಿಷ್ಠೆಯಿಂದ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ

ಬಂಟ್ವಾಳ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಗೂಡಿನಬಲಿ ನಿವಾಸಿ ಅಶ್ರಫ್ ಅವರಿಗೆ ತೀವ್ರ ಎದೆನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥತೆ ಉಂಟಾಯಿತು. ಇದೇ ಸಂದರ್ಭದಲ್ಲಿ ಅವರ ಮನೆಯಿಂದ ಜೋರಾಗಿ ಬಾಗಿಲು ಬಡಿಯುವ ಹಾಗೂ ಆಕ್ರಂದನದ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಬಂಟ್ವಾಳ ನಗರ ಠಾಣೆಯ ನೈಟ್ ಬೀಟ್ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದರು.

ಸ್ಥಳಕ್ಕೆ ತಲುಪಿದಾಗ ಅಶ್ರಫ್ ಅವರಿಗೆ ಲಘು ಹೃದಯಾಘಾತ ಸಂಭವಿಸಿರುವುದು ಗಮನಕ್ಕೆ ಬಂದಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಂಟ್ವಾಳ ನಗರ ಠಾಣೆಯ ನೈಟ್ ಬೀಟ್ ಸಿಬ್ಬಂದಿಗಳಾದ ಪಿಸಿ ವಿನೋದ್ ಹಾಗೂ ಗೃಹರಕ್ಷಕ ಸಿಬ್ಬಂದಿ ಜಯಗಣೇಶ್ ಅವರು ಕೂಡಲೇ ಪ್ರಥಮ ಚಿಕಿತ್ಸೆ ನೀಡಿ ಸಿಪಿಆರ್ (CPR) ನೆರವು ಒದಗಿಸಿದರು.

ಬಳಿಕ ಅವರನ್ನು ಯಾವುದೇ ಸಮಯ ವ್ಯರ್ಥ ಮಾಡದೆ ತುರ್ತಾಗಿ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಂಡರು.

ಬಂಟ್ವಾಳ ನಗರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ವಿನೋದ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಅವರ ಸಮಯಪ್ರಜ್ಞೆ, ತುರ್ತು ಸ್ಪಂದನೆ ಮತ್ತು ಮಾನವೀಯ ಸೇವೆಯಿಂದ ಅಶ್ರಫ್ ಅವರ ಜೀವ ಉಳಿದಿದ್ದು, ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.

Leave a Reply

Your email address will not be published. Required fields are marked *