ಬಂಟ್ವಾಳ: ಸಜೀಪ ಮುನ್ನೂರಿನ ಮಹಾಕಾಳಿ ಪಡ್ಪುವಿನ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಜೂನ್ 12 ರ ಶುಕ್ರವಾರದಂದು ಅಧಿಕಮಾಸ ಪರ್ವಕಾಲದ ಅಂಗವಾಗಿ ವಿಶೇಷ ಪೂಜೆ, ಹೋಮ-ಹವನಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಬಳಿಕ ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು.








