ಬಂಟ್ವಾಳ: ಪ್ರಕರಣದ ವಿಚಾರಣೆಗೆ ಹಾಜರಾಗದೇ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ (41) ಎಂದು ಗುರುತಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ. 309/2017ರ ಕಲಂ 8 (c) 27 B ಎನ್‌ಡಿಪಿಎಸ್ ಪ್ರಕರಣದಲ್ಲಿ ಆರೋಪಿಯಾಗಿದ್ದ ನಜಿರ್ ಅಹ್ಮದ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.

ಆರೋಪಿಯ ಕುರಿತು ಮಾಹಿತಿ ಸಂಗ್ರಹಿಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ಶ್ರೀಕಾಂತ್ ಹಾಗೂ ಅರುಣ್ ಅವರು ವಗ್ಗ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಜೂನ್ 12ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.






