ಬಂಟ್ವಾಳ : ಯುವವಾಹಿನಿ (ರಿ.) ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜೂನ್ 21ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.

ಈ ಸಮಾರಂಭದ ಆಮಂತ್ರಣ ಪತ್ರವನ್ನು ಬಿ.ಸಿ.ರೋಡಿನ ನಾರಾಯಣಗುರು ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ನಿಯೋಜಿತ ಅಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಸ್ಥೆಯ ಸದಸ್ಯರು, ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಘಟಕವು ಕೋರಿದೆ.


