Breaking
16 Jun 2026, Tue

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್. ಬಂಟ್ವಾಳ ತಾಲೂಕು ಬಿ.ಸಿ ರೋಡ್ ವಲಯ ವತಿಯಿಂದ ದೀಪಿಕಾ ಪ್ರೌಢಶಾಲೆ ಮೋಡಂಕಾಪುವಿನಲ್ಲಿ ಗಿಡ ನಾಟಿ ಹಾಗು ಪರಿಸರ ಮಾಹಿತಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರೀ) ಬಿ.ಸಿ. ಟ್ರಸ್ಟ್. ಬಂಟ್ವಾಳ ತಾಲೂಕು ಬಿ ಸಿ ರೋಡ್ ವಲಯ ಮತ್ತು ದೀಪಿಕಾ ಪ್ರೌಢಶಾಲೆ ಮೋಡoಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನಾಟಿ ಕಾರ್ಯಕ್ರಮವು ದೀಪಿಕಾ ಪ್ರೌಢಶಾಲೆಯ ವಠಾರದಲ್ಲಿ ಜೂನ್ 15 ಸೋಮವಾರ ಜರಗಿತು

ಬಂಟ್ವಾಳ ತಾಲೂಕು ಅರಣ್ಯಾಧಿಕಾರಿ ಕೃಷ್ಣ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರತಿ ಮಕ್ಕಳು ತಮ್ಮ ಹುಟ್ಟುಹಬ್ಬದ ದಿನ ಒಂದೊಂದು ಗಿಡ ನಾಟಿ ಮಾಡಿ ಎಂದು ತಿಳಿಸಿ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಕೃಷಿ ಮೇಲ್ವಿಚಾರಕರಾಕ ಭಾಸ್ಕರ್ ರವರು ಪರಿಸರ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದಾಗಿ ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದೀಪಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಾಧು ರವರು ಪರಿಸರವನ್ನು ಉಳಿಸಿ ಬೆಳೆಸೋಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈ ಕಾರ್ಯಕ್ರಮವು ಮಕ್ಕಳಿಗೆ ಸ್ಪೂರ್ತಿದಾಯಕವಾಗಿದೆ ಎಂದು ತಿಳಿಸಿದರು.
ಶಾಲ ಮಕ್ಕಳಿಗೆ ಪರಿಸರದ ಬಗ್ಗೆ ಚಿತ್ರಕಲೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪರಿಸರ ಗೀತೆ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಬಿ ಮೂಡ ಒಕ್ಕೂಟದ ಉಪಾಧ್ಯಕ್ಷರಾದ ಪದ್ಮಾವತಿ ಮೋಡಂಕಾಪು, ಅರಣ್ಯ ಇಲಾಖೆಯ ರೇಖಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಒಕ್ಕೂಟದ ಪದಾಧಿಕಾರಿಗಳಾದ ಉಮೇಶ್, ದೇವಕಿ ಮತ್ತು ಶಾಲೆಯ ಎಲ್ಲಾ ಮಕ್ಕಳು ಉಪಸ್ಥಿತರಿದ್ದರು.
ಬಿ ಮೂಡ ಒಕ್ಕೂಟದ ಸೇವಾಪ್ರತಿನಿಧಿ ಆಶಾಲತಾ ಸ್ವಾಗತಿಸಿ, ಶಿಕ್ಷಕಿ ಶಾಲಿನಿ ವಂದಿಸಿದರು. ಬಿ ಸಿ ರೋಡು ವಲಯದ ಮೇಲ್ವಿಚಾರಕ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *