Breaking
16 Jun 2026, Tue

ಮಂಗಳೂರು: ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

ಮಂಗಳೂರು: ನಗರದ ರಥಬೀದಿಯಲ್ಲಿರುವ ಚಿನ್ನದ ಮಳಿಗೆಗೆ ಕೆಲಸಕ್ಕೆ ತೆರಳಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದವರನ್ನು ಬಜಾಲ್ ನಿವಾಸಿ ಪ್ರಿಯಾಂಕ (21) ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು ಎರಡು ವರ್ಷಗಳಿಂದ ರಥಬೀದಿಯ ಚಿನ್ನದ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರು.

ಜೂನ್ 14ರಂದು ಬೆಳಗ್ಗೆ ಎಂದಿನಂತೆ ಮನೆಯಿಂದ ಕೆಲಸಕ್ಕೆ ತೆರಳಿದ್ದರು. ಬಳಿಕ ಮಧ್ಯಾಹ್ನ ಸುಮಾರು 3.40 ಗಂಟೆಗೆ ತಮ್ಮ ತಾಯಿಗೆ ವಾಟ್ಸಪ್‌ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿ, “ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಕುಟುಂಬಸ್ಥರು ನಗರದ ವಿವಿಧ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದರೂ ಯುವತಿಯ ಸುಳಿವು ಸಿಕ್ಕಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *