Breaking
19 Sep 2026, Sat

ಮದ್ಯದ ಅಮಲಿನಲ್ಲಿ ಟ್ರಾನ್ಸ್ಫಾರ್ಮರ್ ಏರಿದ ವ್ಯಕ್ತಿಗೆ ವಿದ್ಯುತ್ ಶಾಕ್; ಕೆಳಗೆ ಬಿದ್ದು ಗಾಯ

ಪುತ್ತೂರು: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ನಗರದ ಅರುಣ ಸಭಾಭವನದ ಸಮೀಪದ ಟ್ರಾನ್ಸ್ಫಾರ್ಮರ್ ಮೇಲೆ ಏರಲು ಯತ್ನಿಸಿದ ವೇಳೆ ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ವ್ಯಕ್ತಿ ಎಣ್ಣೆಯ ಅಮಲಿನಲ್ಲಿದ್ದ ಸಂದರ್ಭದಲ್ಲಿ ಟ್ರಾನ್ಸ್ಫಾರ್ಮರ್ ಮೇಲೆ ಹತ್ತಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಶಾಕ್ ತಗುಲಿ ಮೇಲಿನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿವೆ.

ಘಟನೆ ಗಮನಿಸಿದ ಸ್ಥಳೀಯರು ತಕ್ಷಣ 108 ಆಂಬುಲೆನ್ಸ್ಗೆ ಕರೆ ಮಾಡಿ ರಕ್ಷಣೆ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯುತ್ ಉಪಕರಣಗಳ ಸಮೀಪ ಹೋಗುವುದು ಹಾಗೂ ಟ್ರಾನ್ಸ್ಫಾರ್ಮರ್ಗಳನ್ನು ಏರುವುದು ಅತ್ಯಂತ ಅಪಾಯಕಾರಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *