Breaking
16 Jun 2026, Tue

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣ

ಬಂಟ್ವಾಳ: ತಾಲೂಕಿನ ಅಲ್ಲಿಪಾದೆ ಪ್ರದೇಶದಲ್ಲಿ ಜ್ವರದಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ದುಃಖದ ಘಟನೆ ನಡೆದಿದೆ.
ಅಲ್ಲಿಪಾದೆಯ ಅನೇಜ ಛಾಯ ಅವರ ಪುತ್ರಿ ಮೃತಪಟ್ಟ ಬಾಲಕಿ ಎಂದು ತಿಳಿದುಬಂದಿದೆ. ಬಾಲಕಿ ಬಂಟ್ವಾಳ ದೇವಳ ಶಾಲೆಯ ಯು.ಕೆ.ಜಿ ವಿದ್ಯಾರ್ಥಿನಿಯಾಗಿದ್ದಳು.

ಮಾಹಿತಿಯಂತೆ, ಶುಕ್ರವಾರ ಶಾಲೆಗೆ ತೆರಳಿದ್ದ ಬಾಲಕಿ ಬಳಿಕ ಅಸ್ವಸ್ಥಗೊಂಡಿದ್ದಳು. ಶನಿವಾರ ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಇದ್ದಳು. ಬಳಿಕ ಭಾನುವಾರ ಜ್ವರ ಕಾಣಿಸಿಕೊಂಡ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದರೂ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಮಂಗಳವಾರ ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ಬಾಲಕಿಯ ನಿಧನದಿಂದ ಕುಟುಂಬ ಹಾಗೂ ಸ್ಥಳೀಯರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *