Breaking
2 Aug 2026, Sun

ವಡೋದರಾ ಭೀಕರ ರಸ್ತೆ ಅಪಘಾತ: ಬಸ್–ಲಾರಿ ಡಿಕ್ಕಿ; ಐವರು ದುರ್ಮರಣ, 26 ಮಂದಿಗೆ ಗಂಭೀರ ಗಾಯ

ಗುಜರಾತ್: ವಡೋದರಾ–ಜಾರೋಡ್ ರಸ್ತೆಯ ಕೋಟಂಬಿ ಗ್ರಾಮದ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 26ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕೆಲ ಪ್ರಯಾಣಿಕರು ಸೀಟುಗಳ ನಡುವೆ ಸಿಲುಕಿ ಮೃತಪಟ್ಟಿದ್ದಾರೆ.

ಅಪಘಾತದ ವೇಳೆ ಹೆಚ್ಚಿನ ಪ್ರಯಾಣಿಕರು ನಿದ್ರೆಯಲ್ಲಿದ್ದ ಕಾರಣ ಸ್ಥಳದಲ್ಲಿ ಗೊಂದಲ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಬ್ದ ಕೇಳಿ ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಮುಂದಾದರು.
ಗಾಯಗೊಂಡ 26 ಮಂದಿಯನ್ನು ವಡೋದರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಯಿಂದ ಬಸ್ಸಿನೊಳಗೆ ಸಿಲುಕಿದ್ದವರನ್ನು ರಕ್ಷಿಸಲು National Disaster Response Force (NDRF) ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಲಾಗಿದ್ದು, ಗ್ಯಾಸ್ ಕಟರ್ ಬಳಸಿ ಬಸ್ಸಿನ ಭಾಗಗಳನ್ನು ತೆರವುಗೊಳಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

Leave a Reply

Your email address will not be published. Required fields are marked *