ಬೆಳ್ತಂಗಡಿ: ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ (18) ಎಂದು ಗುರುತಿಸಲಾಗಿದೆ.

ಕುಟುಂಬವು ಕಳೆದ ಸುಮಾರು ಐದು ವರ್ಷಗಳಿಂದ ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಂಗಳವಾರ ಬೆಳಗ್ಗೆ ಶ್ವೇತಾ ಎಂದಿನಂತೆ ಎದ್ದು ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ, ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಘಟನೆಯ ಸಂದರ್ಭದಲ್ಲಿ ತಂದೆ ಕೆಲಸಕ್ಕೆ ತೆರಳಿದ್ದು, ತಾಯಿ ಮನೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆ ನಲ್ಲಿ ಪ್ರಕರಣ ದಾಖಲಾಗಿದೆ.






