Breaking
2 Aug 2026, Sun

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಜಾಲ ಭೇದ: 16 ಜಾನುವಾರುಗಳ ರಕ್ಷಣೆ, ಇಬ್ಬರ ಬಂಧನ

ಉಪ್ಪಿನಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದು, 16 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಘಟ್ಟ ಪ್ರದೇಶದಿಂದ ಜಾನುವಾರುಗಳನ್ನು ಕಾನೂನುಬಾಹಿರವಾಗಿ ಕೇರಳಕ್ಕೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಭಜರಂಗದಳ ಕಾರ್ಯಕರ್ತರಿಂದ ಉಪ್ಪಿನಂಗಡಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ, ಲಾರಿಯೊಳಗೆ ಅಮಾನುಷವಾಗಿ ಕಿಕ್ಕಿರಿದು ತುಂಬಲಾಗಿದ್ದ 16 ಜಾನುವಾರುಗಳು ಪತ್ತೆಯಾಗಿವೆ.

ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಜಾನುವಾರುಗಳನ್ನು ಸುರಕ್ಷಿತವಾಗಿ ಕೆಳಗಿಳಿಸಿ ರಕ್ಷಣೆ ಒದಗಿಸಿದ್ದಾರೆ. ಈ ವೇಳೆ ಲಾರಿ ಚಾಲಕ ಹಾಗೂ ನಿರ್ವಾಹಕನನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಪರಾರಿಯಾದ ಆರೋಪಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *