Breaking
19 Sep 2026, Sat

ನಕ್ಷತ್ರ ಆಮೆ ಮಾರಾಟ ಯತ್ನ: ಇಬ್ಬರ ಬಂಧನ

ಮಡಿಕೇರಿ: ಅಕ್ರಮವಾಗಿ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಮಡಿಕೇರಿ ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶ್ರೀಧರನ್ ಸಿ.ಕೆ. (70) ಹಾಗೂ ವಿಷ್ಣು ಆಚಾರ್ಯ (68) ಎಂದು ಗುರುತಿಸಲಾಗಿದೆ.

ಕನ್ನಂಡ ಪಡುಬೀರ ವೃತ್ತದ ಸಮೀಪದ ಬಸ್ ತಂಗುದಾಣದಲ್ಲಿ ಇಬ್ಬರು ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿಗಳನ್ನು ಬಂಧಿಸಿ, ಒಂದು ನಕ್ಷತ್ರ ಆಮೆಯನ್ನು ವಶಪಡಿಸಿಕೊಂಡರು.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಂಗೀತಾ ಜಿ. ಹಾಗೂ ಪವನ್ ನೆಟ್ಟೂರು ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ಶಿವಶಂಕರ್ ಸೇರಿದಂತೆ ಸಿಬ್ಬಂದಿ ಉಮೇಶ್ ಎನ್.ಕೆ., ಶನಂತ ಕೆ.ಪಿ., ದಿವ್ಯಶ್ರೀ ಎಚ್.ಎಸ್. ಮತ್ತು ಸ್ವಾಮಿ ಎಂ. ಭಾಗವಹಿಸಿದ್ದರು.

Leave a Reply

Your email address will not be published. Required fields are marked *