Breaking
19 Sep 2026, Sat

ಎರಡು ಕಾರು–ಬೈಕ್ ನಡುವೆ ಸರಣಿ ಅಪಘಾತ; ಸವಾರ ಗಾಯ

ಬೆಳ್ತಂಗಡಿ: ಎರಡು ಕಾರುಗಳು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುರುವಾಯನಕೆರೆ ಸಮೀಪ ನಡೆದಿದೆ.

ಮಂಗಳೂರು–ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಬಳಿ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರು ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಉರುಳಿ ಬಿದ್ದು ಗಾಯಗೊಂಡಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಪಘಾತದ ಪರಿಣಾಮ ಒಂದು ಕಾರು ಪಲ್ಟಿಯಾಗಿದ್ದು, ಮತ್ತೊಂದು ಕಾರಿನ ಮುಂಭಾಗಕ್ಕೂ ತೀವ್ರ ಹಾನಿಯಾಗಿದೆ.ಕಾರುಗಳಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *