Breaking
18 Jun 2026, Thu

ಹೆಂಡತಿಗೆ ಚಾಕುವಿನಿಂದ ಇರಿದು, ಬಳಿಕ ಪತಿ ಆತ್ಮಹತ್ಯೆ

ಕನಕಪುರ: ಪ್ರೀತಿಸಿ ವಿವಾಹವಾಗಿದ್ದ ಪತ್ನಿ ದೂರವಾಗಿದ್ದ ಹಿನ್ನೆಲೆ ಪತಿಯೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಚ್ಚಲು ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕೋಡಿಹಳ್ಳಿ ಹೋಬಳಿಯ ತಿಪ್ಪೂರು ಗ್ರಾಮದ ಸಂಜಯ್ (26) ಮೃತ ವ್ಯಕ್ತಿ. ಪತ್ನಿ ನಿಸರ್ಗ (25) ಅವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ಅದೇ ಚಾಕುವಿನಿಂದ ತಾನೂ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡಿರುವ ನಿಸರ್ಗ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಸಂಜಯ್ ಮತ್ತು ನಿಸರ್ಗ ಅವರು ಸುಮಾರು ಐದಾರು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಕಳೆದ ಆರು ತಿಂಗಳಿಂದ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ನಿಸರ್ಗ ತವರು ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ಸಂಜಯ್ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *